ಬೆಂಗಳೂರು: ಸಾಹಿತ್ಯ ಕ್ಷೇತ್ರದಲ್ಲಿ ಕೃಷಿಮಾಡುವವರಿಗೆ ಉದ್ದಟತನ ಮತ್ತು ಸಿನಿಕತನ ಇರಬಾರದು ಇದರಿಂದ ಸೃಜಶೀಲ ಸಾಹಿತ್ಯ ಹಾದಿ ತಪ್ಪುತ್ತದೆ ಎಂದು ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಪತ್ರಕರ್ತ ತುರುವನೂರು ಮಂಜುನಾಥ ಅವರ ‘ಮೊಳಕೆʼ ಕೃತಿಯನ್ನು ಬಿಡಗಡೆಗೊಳಿಸಿ ಮಾತನಾಡಿದ ಅವರು ಸಾಹಿತ್ಯ ಕ್ಷೇತ್ರದಲ್ಲಿ ವಿನಮ್ರತೆಯಿಂದ ವಿಷಯ ಮತ್ತು ವಿಮರ್ಶೆಗಳ ಮಂಡನೆಯಿಂದ ಬರಹಗಾರ ಮೌಲಿಕ ಗುಣಗಳು ಪ್ರಮುಖ ಪಾತ್ರ ವಹಿಸುತ್ತಾನೆ ಎಂದು ಹೇಳಿದರು. ಸಾಹಿತ್ಯ ವಲಯದಲ್ಲಿ ಇತ್ತೀಚಿನ ದಿನಗಳಲ್ಲಿ ಸಂವಾದ ಸಂಸ್ಕೃತಿ ಕಡಿಮೆಯಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು ಹಿಂದಿನ ಸಾಹಿತಿಗಳ ನಡುವೆ ಸಾಹಿತ್ಯ ಸಂವಾದಗಳು ನಡೆಯುತ್ತಿದ್ದ ಕಾರಣ ಗುಣಮಟ್ಟದ ಸಾಹಿತ್ಯ ರಚನೆಯಾಗುತ್ತಿದ್ದವು. ಆದರೆ ಇತ್ತೀಚಿನ ದಿನಗಳ ಅಂತಹ ವಾತಾವರಣ ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದರು. ಸಾಹಿತ್ಯ ವಲಯದಲ್ಲಿ ಇತ್ತೀಚಿನ ದಿನಗಳಲ್ಲಿ ಸಂವಾದ ಸಂಸ್ಕೃತಿ ಕಡಿಮೆಯಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು ಹಿಂದಿನ ಸಾಹಿತಿಗಳ ನಡುವೆ ಸಾಹಿತ್ಯ ಸಂವಾದಗಳು ನಡೆಯುತ್ತಿದ್ದ ಕಾರಣ ಗುಣಮಟ್ಟದ ಸಾಹಿತ್ಯ ರಚನೆಯಾಗುತ್ತಿದ್ದವು. ಆದರೆ ಇತ್ತೀಚಿನ ದಿನಗಳ ಅಂತಹ ವಾತಾವರಣ ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದರು.