ಆಸ್ಮಿತಾ ವುಮೆನ್ಸ್ ಸೈಕ್ಲಿಂಗ್ ಲೀಗ್‌ಗೆ ಸಂಸದ ಜಿಗಜಿಣಗಿ ಚಾಲನೆ

Homeರಾಜ್ಯ

ಆಸ್ಮಿತಾ ವುಮೆನ್ಸ್ ಸೈಕ್ಲಿಂಗ್ ಲೀಗ್‌ಗೆ ಸಂಸದ ಜಿಗಜಿಣಗಿ ಚಾಲನೆ

ವಿಜಯಪುರ : ಸೈಕ್ಲಿಂಗ್ ಕ್ರೀಡೆಗೆ ರಾಜ್ಯದಲ್ಲೇ ವಿಶಿಷ್ಟ ಗುರುತನ್ನು ಹೊಂದಿರುವ ವಿಜಯಪುರ ನಗರದಲ್ಲಿ ಜಿಲ್ಲಾ ಮಟ್ಟದ ಆಸ್ಮಿತಾ ಖೇಲೋ ಇಂಡಿಯಾ ಮಹಿಳಾ ಸೈಕ್ಲಿಂಗ್ ಸಿಟಿ ಲೀಗ್ ಸ್ಪರ್

ಅಂಗ ವೈಫಲ್ಯತೆಯನ್ನು ಮೆಟ್ಟಿ ನಿಲ್ಲಿ :ಪ್ರಿಯಾಂಕಾ ಜಾರಕಿಹೊಳಿ
ಎಸ್‌ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ರಾಷ್ಟ್ರಪತಿಗಳಿಗೆಲಿಖಿತ ಮನವಿ
ರೈತ ಸಂಘದಿಂದ ಬೃಹತ್ ಪ್ರತಿಭಟನೆ
ವಿಜಯಪುರ : ಸೈಕ್ಲಿಂಗ್ ಕ್ರೀಡೆಗೆ ರಾಜ್ಯದಲ್ಲೇ ವಿಶಿಷ್ಟ ಗುರುತನ್ನು ಹೊಂದಿರುವ ವಿಜಯಪುರ ನಗರದಲ್ಲಿ ಜಿಲ್ಲಾ ಮಟ್ಟದ ಆಸ್ಮಿತಾ ಖೇಲೋ ಇಂಡಿಯಾ ಮಹಿಳಾ ಸೈಕ್ಲಿಂಗ್ ಸಿಟಿ ಲೀಗ್ ಸ್ಪರ್ಧೆಯನ್ನು ಶನಿವಾರ ಅದ್ಧೂರಿಯಾಗಿ ಆಯೋಜಿಸಲಾಯಿತು.
ಕೇಂದ್ರ ಸರ್ಕಾರದ ಕ್ರೀಡಾ ಪ್ರಾಧಿಕಾರ, ಸೈಕ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಶನ್, ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಶನ್, ವಿಶಾಲ್ ಸೈಕಲ್ ಮಾಲ್, ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಲೀಗ್‌ಗೆ ಸಂಸದ ರಮೇಶ ಜಿಗಜಿಣಗಿ ಹಾಗೂ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಪ್ರಿನ್ಸಿಪಲ್ ರಾಜಲಕ್ಷ್ಮಿ ಪೃಥ್ವಿರಾಜ್, ಅಧ್ಯಕ್ಷ ರಾಜು ಬಿರಾದಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ, ದೇಶದಲ್ಲಿ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ಕೇಂದ್ರ ಸರ್ಕಾರ ವಿಶೇಷ ಒತ್ತು ನೀಡುತ್ತಿದ್ದು, ಮಹಿಳಾ ಕ್ರೀಡಾಪಟುಗಳಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ವಿವಿಧ ಜಿಲ್ಲೆಗಳಲ್ಲಿ ಸೈಕ್ಲಿಂಗ್ ಸೇರಿದಂತೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಪ್ರತಿಭೆಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

COMMENTS

WORDPRESS: 0
DISQUS: