ಡಾ.ಅಂಬೇಡ್ಕರ ಅಧ್ಯಯನ ಕೇಂದ್ರದ ನಿರ್ದೇಶಕರನ್ನು ವಜಾ ಮಾಡಿ : ಮನವಿ

Homeಪ್ರಾದೇಶಿಕ

ಡಾ.ಅಂಬೇಡ್ಕರ ಅಧ್ಯಯನ ಕೇಂದ್ರದ ನಿರ್ದೇಶಕರನ್ನು ವಜಾ ಮಾಡಿ : ಮನವಿ

ವಿಜಯಪುರ : ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ವಿಶ್ವವಿದ್ಯಾಲಯದ ಘನತೆ ಕಾಪಾಡಲು ಲೈಂಗಿಕ ಕಿರುಕುಳದ ಆರೋಪ ವಿರುವ ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರನ್ನ ವಜಾ

ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ
ಜಾಗತಿಕ ಮಟ್ಟದಲ್ಲಿ ಭಾರತದ ಆರ್ಥಿಕತೆ ಪ್ರಗತಿ : ನಿರ್ಮಲಾ ಸೀತಾರಾಮನ್
ಮಧ್ಯ ಪ್ರದೇಶ: ಲಿವ್​ಇನ್ ಸ್ನೇಹಿತೆಯನ್ನು ಕೊಂದು ಫ್ರಿಡ್ಜ್​ನಲ್ಲಿಟ್ಟ ವಿವಾಹಿತ! ಬರೋಬ್ಬರಿ 8 ತಿಂಗಳು ಅಲ್ಲೇ ಇತ್ತು ಮೃತದೇಹ
ವಿಜಯಪುರ : ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ವಿಶ್ವವಿದ್ಯಾಲಯದ ಘನತೆ ಕಾಪಾಡಲು ಲೈಂಗಿಕ ಕಿರುಕುಳದ ಆರೋಪ ವಿರುವ ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರನ್ನ ವಜಾ ಮಾಡುವಂತೆ ದ್ರಾವಿಡ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ರಾಜ್ಯಪಾಲರಿಗೆ ಲಿಖಿತ ಮನವಿ ಸಲ್ಲಿಸಿದರು.
ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯ್ ಕುಮಾರ್ ಅಜಮನಿ ಮಾತನಾಡಿ, ರಾಜ್ಯದ ವಿವಿಧ ಭಾಗಗಳಿಂದ, ವಿಶೇಷವಾಗಿ ಸಾಮಾಜಿಕ ಹಾಗೂ ಆರ್ಥಿಕ ವಾಗಿ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣಕ್ಕಾಗಿ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಆಗಮಿಸುತ್ತಾರೆ. ಇಂತಹ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ, ಗೌರವ ಹಾಗೂ ನ್ಯಾಯಯುತ ವಾತಾವರಣಕ್ಕೆ ಮೊದಲ ಆದ್ಯತೆ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ, ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋ ಧನಾ ಕೇಂದ್ರದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವವರ ಮೇಲೆ  ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗಿ ರುವ ಆರೋಪಗಳ ಬಗ್ಗೆ ನಿಷ್ಪಕ್ಷಪಾತ ಹಾಗೂ ಸ್ವತಂತ್ರ ತನಿಖೆ ನಡೆಸಬೇಕು, ಅಲ್ಲಿಯವರೆಗೆ ಅವರನ್ನು ಆ ಸ್ಥಾನದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.
ಡಾ.ಅಂಬೇಡ್ಕರ್ ಚಿಂತನೆಗಳು ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಮಹಿಳಾ ಗೌರವದ ತತ್ವಗಳ ಮೇಲೆ ಆಧಾರಿತವಾಗಿದ್ದು, ಇಂತಹ ಮೌಲ್ಯಗಳನ್ನು ಪ್ರತಿನಿಧಿಸುವ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವವರ ಬಗ್ಗೆ ಯಾವುದೇ ಗಂಭೀರ ಆರೋಪಗಳು ಕಂಡುಬAದಲ್ಲಿ ಅವುಗಳನ್ನು ಪಾರದರ್ಶಕವಾಗಿ ಪರಿಶೀಲಿಸುವುದು ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.
ಆರೋಪಗಳ ಕುರಿತು ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು, ತನಿಖೆ ಪೂರ್ಣಗೊಳ್ಳುವವರೆಗೆ ಸಂಬAಧಿತ ನೇಮಕಾತಿ ಮತ್ತು ಆಡಳಿತಾತ್ಮಕ ಜವಾಬ್ದಾರಿಗಳನ್ನು ಮರುಪರಿಶೀಲಿಸಬೇಕು.
ವಿದ್ಯಾರ್ಥಿನಿಯರ ಸುರಕ್ಷತೆ ಹಾಗೂ ವಿಶ್ವಾಸವನ್ನು ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಮಹಿಳಾ ಸುರಕ್ಷತೆ ಮತ್ತು ಲೈಂಗಿಕ ಕಿರುಕುಳ ತಡೆಗೆ ಸಂಬAಧಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ವಿದ್ಯಾರ್ಥಿನಿಯರ ಹಿತಾಸಕ್ತಿ, ಮಾನವೀಯತೆ, ಸಾಮಾಜಿಕ ನ್ಯಾಯ ಹಾಗೂ ಕಾನೂನಿನ ಆಳ್ವಿಕೆಯನ್ನು ಬಲಪಡಿಸುವ ಉದ್ದೇಶದಿಂದ ಈ ಮನವಿ ಸಲ್ಲಿಸಲಾಗಿದ್ದು, ಸಂಬAಧಿತ ಅಧಿಕಾರಿಗಳು ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಚಾರ ಮಂಡಿಸಿ ಲೈಂಗಿಕ ಕಿರುಕುಳ ಆರೋಪದಲ್ಲಿ ತಕ್ಷಣ ವಜಾ ಮಾಡಬೇಕು ಎಂದು ಒತ್ತಾಯಿಸಿದರು.
ರಾಹುಲ್ ಕಳಸದ, ಮಂಜುನಾಥ್ ಕವಳಿ, ಸಂದೇಶ್ ಕುಮಟಗಿ, ಆದರ್ಶ, ದರ್ಶನ್, ಸಂದೀಪ್, ವಿಜಯ, ಮುಂತಾದವರು ಭಾಗಿಯಾಗಿದ್ದರು.

COMMENTS

WORDPRESS: 0
DISQUS: