ಎಸ್‌ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ರಾಷ್ಟ್ರಪತಿಗಳಿಗೆಲಿಖಿತ ಮನವಿ

Homeಪ್ರಾದೇಶಿಕ

ಎಸ್‌ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲು ರಾಷ್ಟ್ರಪತಿಗಳಿಗೆಲಿಖಿತ ಮನವಿ

ವಿಜಯಪುರ : ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ ಮರುಪರಿಶೀಲನೆ ನಡೆಸುವಂತೆ ಆಗ್ರಹಿಸಿ, ವಿಜಯಪುರದಲ್ಲಿ ವಿವಿಧ ಸಾಮಾಜಿಕ, ಪ್ರಗತಿಪರ

ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಇಂದು
ಬೀದಿನಾಯಿಗಳ ಹಾವಳಿ : ಕ್ರಮಕ್ಕೆ ಅಣ್ಣಿಗೇರಿ ಆಗ್ರಹ
ಡಾ.ಅಂಬೇಡ್ಕರ ಅಧ್ಯಯನ ಕೇಂದ್ರದ ನಿರ್ದೇಶಕರನ್ನು ವಜಾ ಮಾಡಿ : ಮನವಿ
ವಿಜಯಪುರ : ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ ಮರುಪರಿಶೀಲನೆ ನಡೆಸುವಂತೆ ಆಗ್ರಹಿಸಿ, ವಿಜಯಪುರದಲ್ಲಿ ವಿವಿಧ ಸಾಮಾಜಿಕ, ಪ್ರಗತಿಪರ ಹಾಗೂ ನಾಗರಿಕ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಲಿಖಿತ ಮನವಿ ಸಲ್ಲಿಸಿದರು.
ಕೈಗೆ ಕಪ್ಪು ಪಟ್ಟಿ ಧರಿಸಿದ ಅನೇಕ ಹೋರಾಟಗಾರರು ಉದ್ದೇಶವೊಂದನ್ನು ಸಾಕಾರಗೊಳಿಸಲು ಈ ಪ್ರಕ್ರಿಯೆ ನಡೆಲಾಗುತ್ತಿದೆ, ಇದು ಸರಿಯಾದ ಪ್ರಕ್ರಿಯೆಲ್ಲ, ಕೂಡಲೇ ಇದನ್ನು ತಡೆ ಹಿಡಿಯುವ ನಿಟ್ಟಿನಲ್ಲಿ ರಾಷ್ಟçಪತಿಗಳು ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.
ಚುನಾವಣಾ ಆಯೋಗವು ಜಾರಿಗೊಳಿಸಿರುವ ಎಸ್‌ಐಆರ್ ಪ್ರಕ್ರಿಯೆಯು ದೇಶದ ಕೋಟ್ಯಂತರ ಮತದಾರರ ಮತದಾನದ ಹಕ್ಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದ್ದು, ವಿಶೇಷವಾಗಿ ಬಡವರು, ಗ್ರಾಮೀಣ ಪ್ರದೇಶದ ಜನರು, ವಲಸೆ ಕಾರ್ಮಿಕರು, ಹಿರಿಯ ನಾಗರಿಕರು, ಮಹಿಳೆಯರು, ದಲಿತರು, ಆದಿವಾಸಿಗಳು ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ತೊಂದರೆಯಾಗುವ ಆತಂಕವಿದೆ ಎಂದು ಹೋರಾಟಗಾರರು ಆತಂಕ ವ್ಯಕ್ತಪಡಿಸಿದರು.
ಕೇವಲ ೩೦ ದಿನಗಳೊಳಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ವಿಧಿಸಿರುವ ಷರತ್ತು ಸಾಮಾನ್ಯ ನಾಗರಿಕರಿಗೆ ಕಷ್ಟಕರವಾಗಿದ್ದು, ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಕೈಬಿಡುವ ಅಪಾಯವಿದೆ ಎಂದು ಮನವಿಯಲ್ಲಿ ಉಲ್ಲೇಖಿಸಿ ರಾಷ್ಟçಪತಿಗಳಿಗೆ ಸಲ್ಲಿಕೆ ಮಾಡಲಾಯಿತು.
ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ, ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಆಡಳಿತಾತ್ಮಕ ಪ್ರಕ್ರಿಯೆಗಳ ಹೆಸರಿನಲ್ಲಿ ಯಾರೊಬ್ಬರ ಮತದಾನದ ಹಕ್ಕು ಕಸಿದುಕೊಳ್ಳುವಂತಾಗಬಾರದು. ಎಸ್‌ಐಆರ್ ಪ್ರಕ್ರಿಯೆಯನ್ನು ಮರುಪರಿಶೀಲಿಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿದ ನಂತರವೇ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಡಿಎಸ್‌ಸ್ ಜಿಲ್ಲಾ ಸಂಚಾಲಕ ಚೆನ್ನು ಕಟ್ಟಿಮನಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮತದಾರರ ಹಕ್ಕು ಅತ್ಯಂತ ಮಹತ್ವದ್ದಾಗಿದ್ದು, ಬಡವರು ಹಾಗೂ ದಾಖಲೆಗಳ ಕೊರತೆಯಲ್ಲಿರುವ ನಾಗರಿಕರಿಗೆ ಅನ್ಯಾಯವಾಗದಂತೆ ಸರ್ಕಾರ ಮತ್ತು ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸ್ಲಂ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಕ್ರಮ ಮಾಶಾಳಕರ ಮಾತನಾಡಿದರು. ಯು.ಎಚ್. ಖದೀರ್, ಅನಿಲ್ ಹೊಸಮನಿ, ಫಯಾಜ್ ಕಲಾದಗಿ, ಸುರೇಶ್ ಬಿಜಾಪುರ, ಡಾ. ಗುರಿಕಾರ, ಆಮ್ ಆದ್ಮಿ ಪಕ್ಷದ ಜಿಲ್ಲಾ ಅಧ್ಯಕ್ಷ ಭೋಗೇಶ್ ಸೊಲ್ಲಾಪುರ, ವಿದ್ಯಾವತಿ ಅಂಕಲಗಿ ಪಾಲ್ಗೊಂಡಿದ್ದರು.

COMMENTS

WORDPRESS: 0
DISQUS: