ತಾಜಾ ಸುದ್ದಿ

BBL: 14 ಎಸೆತಗಳಲ್ಲಿ 76 ರನ್..! ಮ್ಯಾಕ್ಸ್‌ವೆಲ್ ಕೈಬಿಟ್ಟು ತಪ್ಪು ಮಾಡ್ತಾ ಆರ್​ಸಿಬಿ?

Glenn Maxwell: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್‌ನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಅದ್ಭುತ ಪ್ರದರ್ಶನ ಮುಂದುವರೆದಿದೆ. ಮೆಲ್ಬೋರ್ನ್ ಸ್ಟಾರ್ಸ್ ಪರ ಆಡುತ್ತಿರುವ ಅವರು 52 ಎಸೆತಗಳಲ್ಲಿ 10 ಸಿಕ್ಸರ್‌ ಮತ್ತು 4 ಬೌಂಡರಿಗಳ ಸಹಿತ 90 ರನ್ ಗಳಿಸಿದ್ದಾರೆ. ತಮ್ಮ ಆಕರ್ಷಕ ಬ್ಯಾಟಿಂಗ್ ಮೂಲಕ ತಂಡವನ್ನು ಗೆಲುವಿನೆಡೆಗೆ ಕೊಂಡೊಯ್ದ ಮ್ಯಾಕ್ಸ್‌ವೆಲ್ ಅವರನ್ನು ಆರ್‌ಸಿಬಿ ತಂಡ ಕೈಬಿಟ್ಟಿರುವುದು ಅಭಿಮಾನಿಗಳಲ್ಲಿ ನಿರಾಶೆಯನ್ನುಂಟು ಮಾಡಿದೆ.
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್​ ಬ್ಯಾಷ್ ಲೀಗ್​ನಲ್ಲಿ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ತಮ್ಮ ಸ್ಫೋಟಕ ಆಟದ ಮೂಲಕ ಮೈದಾನದಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ. ಈ ಲೀಗ್​ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ತಂಡದ ಪರ ಕಣಕ್ಕಿಳಿಯುತ್ತಿರುವ ಮ್ಯಾಕ್ಸ್‌ವೆಲ್ 6ನೇ ಕ್ರಮಾಂಕದಲ್ಲಿ ಅಖಾಡಕ್ಕಿಳಿದು ಬೌಂಡರಿ ಸಿಕ್ಸರ್​ಗಳ ಮಳೆಗರಿದಿದ್ದಾರೆ. ಎದುರಾಳಿ ತಂಡದ ಪ್ರತಿಯೊಬ್ಬ ಬೌಲರ್​ಗಳನ್ನು ಕಾಡಿದ ಮ್ಯಾಕ್ಸ್‌ವೆಲ್ ಕೇವಲ 52 ಎಸೆತಗಳಲ್ಲಿ 4 ಬೌಂಡರಿ ಹಾಗೂ 10 ಭರ್ಜರಿ ಸಿಕ್ಸರ್​ಗಳ ಸಹಿತ 90 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದಾರೆ. ಅಂದರೆ ಮ್ಯಾಕ್ಸ್‌ವೆಲ್ ಕೇವಲ ಬೌಂಡರಿ ಹಾಗೂ ಸಿಕ್ಸರ್​ಗಳಿಂದಲೇ ಬರೋಬ್ಬರಿ 76 ರನ್ ಕಲೆಹಾಕಿದ್ದಾರೆ.

Share the Post:

Related Post