ಈ ಹಿಂದೆ ಚನ್ನಪಟ್ಟಣ ಉಪಚುನಾವಣೆ ಸಂದರ್ಭದಲ್ಲಿ ತಮ್ಮ ಆಸ್ತಿಯನ್ನು ಮಾರಾಟ ಮಾಡದಂತೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಇದೀಗ ಮತ್ತೊಮ್ಮೆ ಕನಕಪುರದಲ್ಲಿ ಅವರು ಜನರಿಗೆ ತಮ್ಮ ಆಸ್ತಿಯನ್ನು ಮಾರಾಟ ಮಾಡದಂತೆ ಮನವಿ ಮಾಡಿದ್ದಾರೆ. ಭವಿಷ್ಯದಲ್ಲಿ ಭೂಮಿಯ ಬೆಲೆಗಳು ಏರಿಕೆಯಾಗಲಿವೆ ಎಂದು ಹೇಳಿದ್ದಾರೆ.
ರಾಮನಗರ, ಜನವರಿ 12: ಕೆಲವೇ ದಿನಗಳಲ್ಲಿ ಬ್ರೋಕರ್ಗಳು ನಿಮ್ಮ ಮನೆಗೆ ಬರುತ್ತಾರೆ. ಯಾವುದೇ ಕಾರಣಕ್ಕೂ ನಿಮ್ಮ ಆಸ್ತಿ ಮಾರಿಕೊಳ್ಳಬೇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಈ ಹಿಂದೆ ಚನ್ನಪಟ್ಟಣ ಉಪಚುನಾವಣೆ ಸಂದರ್ಭದಲ್ಲೂ ಸಹ ಇದೇ ಮಾತು ಹೇಳಿದ್ದ ಡಿಕೆ ಶಿವಕುಮಾರ್ ಇದೀಗ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.
