Karun Nair’s Fourth Century: ವಿದರ್ಭ ತಂಡವು ರಾಜಸ್ಥಾನವನ್ನು ವಿಜಯ್ ಹಜಾರೆ ಟ್ರೋಫಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 9 ವಿಕೆಟ್‌ಗಳಿಂದ ಸೋಲಿಸಿದೆ. ಕರುಣ್ ನಾಯರ್ ಅವರು 122 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ್ದು, ಇದು ಟೂರ್ನಿಯಲ್ಲಿ ಅವರ 5ನೇ ಹಾಗೂ ಸತತ 4ನೇ ಶತಕವಾಗಿದೆ. ಈ ಮೂಲಕ ಕರುಣ್ ನಾಯರ್ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಸತತ ನಾಲ್ಕು ಶತಕಗಳನ್ನು ಗಳಿಸಿದ ಮೂರನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ದಾಖಲೆ ಕೂಡ ನಿರ್ಮಿಸಿದ್ದಾರೆ.
ವಿಜಯ್ ಹಜಾರೆ ಟ್ರೋಫಿಯನಲ್ಲಿ ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ವಿದರ್ಭ ತಂಡ, ರಾಜಸ್ಥಾನ ತಂಡವನ್ನು 9 ವಿಕೆಟ್‌ಗಳಿಂದ ಮಣಿಸಿ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ. ವಡೋದರದ ಮೋತಿಬಾಗ್ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ತಂಡ 8 ವಿಕೆಟ್ ನಷ್ಟಕ್ಕೆ 291 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ವಿದರ್ಭ ತಂಡ ಇನ್ನು 39 ಎಸೆತಗಳು ಬಾಕಿ ಇರುವಂತೆಯೇ ಕೇವಲ 1 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು. ತಂಡದ ಪರ ಗೆಲುವಿನ ಇನ್ನಿಂಗ್ಸ್ ಆಡಿದ ನಾಯಕ ಕರುಣ್ ನಾಯರ್ ಈ ಟೂರ್ನಿಯಲ್ಲಿ ಸತತ 4ನೇ ಶತಕ ಸಿಡಿಸಿ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ಎಂಬ ದಾಖಲೆಯನ್ನು ನಿರ್ಮಿಸಿದರು.
